
ಪ್ರಗತಿವಾಹಿನಿ ಸುದ್ದಿ: ನಿಷೇಧಿತ ಎಂಡಿಎಂಎ ಮಾತ್ರೆಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಅಜ್ಯ ಹೆದ್ದಾರಿಯಲ್ಲಿ ವಾಹನ ತಪಾಅಸಣೆ ನಡೆಸುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬಂದ ಮಾರುತಿ ಸುಜುಕಿ ಕಾರು ಪರಿಶೀಲಿಸಿದಾಗ ಡ್ಯಾಶ್ ಬೋರ್ಡ್ ನಲ್ಲಿ ಮಾದಕವಸ್ತುಗಳು ಪತ್ತೆಯಾಗಿವೆ.
ಕಾರಿನ ಚಾಲಕ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಎಂಡಿಎಂಎ ಮಾರಟ ಮಾಡಲು ತೆರಳುತ್ತಿರುವುದಾಗಿ ಬಾಯ್ಬಿಟ್ಟಿದ್ದಾರೆ. ತಕ್ಷಣ ಕಾರಿನ ಸಮೇತ ಮಾದಕವಸ್ತು ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಂಧಿತರನ್ನು ಇಸುಬು ಫೈಝಲ್ ಹಾಗೂ ತಸ್ಲೀಮ್ ಎಂದು ಗುರುತಿಸಲಾಗಿದೆ.