Latest

ಪತ್ನಿ ಮೇಲೆ ಹಲ್ಲೆ; ಡ್ರಗ್ಸ್ ಪ್ರಕರಣದ ಆರೋಪಿ ವೈಭವ್ ಜೈನ್ ವಿರುದ್ಧ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ವೈಭವ್ ಜೈನ್ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿಬಂದಿದ್ದು, ಪತ್ನಿಯ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಜೈನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪತಿ ವೈಭವ್ ಜೈನ್ ತನ್ನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಿ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಕೂಡ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸರು ಬಂಧಿಸಿದ್ದರು.

Home add -Advt

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ವೈಭವ್ ಮತ್ತೆ ಪತ್ನಿ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆಯೊಡ್ಡಿದ್ದಾಗಿ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Related Articles

Back to top button