Kannada NewsKarnataka NewsLatest
*ಮಾದಕ ವಸ್ತು ಪೂರೈಸುತ್ತಿದ್ದ ಮಹಿಳೆ ಅರೆಸ್ಟ್: ಮೌಲ್ಯ ಕೇಳಿದ್ರೆ ಶಾಕ್ ಆಗ್ತೀರಾ*

ಪ್ರಗತಿವಾಹಿನಿ ಸುದ್ದಿ: ಡ್ರಗ್ಸ್ ಪೆಡ್ಲರ್ ಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಮಹಿಳೆಯನ್ನು ಬಂಧಿಸಿರುವ ಪೊಲೀಸರು ಆಕೆಯ ಮನೆಯಲ್ಲಿ ಬರೋಬ್ಬರಿ 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆ ಇದಾಗಿದೆ. ಮಂಗಳೂರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಉಗಾಂಡಾ ಮೂಲದ ಮಹಿಳೆಯನ್ನು ಬೆಂಗಳೂರಿನ ಜಿಗಣಿ ಬಳಿ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಜಿಗಣಿ ಬಳಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಆಕೆಯ ಬಳಿ ಇದ್ದ 4 ಕೋಟಿ ರೂಪಾಯಿ ಮೌಲ್ಯದ 4 ಕೆಜಿ ಎಂಡಿಎಂಎ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ಪ್ರಕರಣದಲ್ಲಿ ಮಂಗಳೂರಿನಲ್ಲಿ ಆರು ಪೆಡ್ಲರ್ ಗಳನ್ನು ಬಂಧಿಸಲಾಗಿದೆ.



