
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಇಂದು ಜಾಮೀನಿಗಾಗಿ ಕೋರ್ಟ್‌ನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.
ನಟಿ ರಾಗಿಣಿ ಈ ಹಿಂದೆಯೇ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಆ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ರಾಗಿಣಿ ಮುಂಬೈ ಮೂಲದ ವಕೀಲರೊಬ್ಬರಿಂದ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೇ ಪ್ರಕರಣದ ಐದನೇ ಆರೋಪಿ ವೈಭವ್ ಜೈನ್ ಪೊಲೀಸರಿಗೆ ಹೆದರಿ ಇದೀಗ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನು ನೀಡುವಂತೆ ನ್ಯಾಯಾಲಯದ ಎದುರು ಮನವಿ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ಈ ನಡುವೆ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ, ಸಂಜನಾ, ರಾಹುಲ್, ಪ್ರಶಾಂತ್ ರಾಂಕಾ, ಲೂಮ್ ಪೆಪ್ಪರ್, ನಯೀಜ್ ರನ್ನು ಸಿಸಿಬಿ ಪೊಲೀಸರು ಡೋಪಿಂಗ್ ಟೆಸ್ಟ್ ಗೆ ಒಳಪಡಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.