Latest

ಜಾಮೀನಿಗಾಗಿ ಮತ್ತೆ ಅರ್ಜಿ ಸಲ್ಲಿಸಿದ ನಟಿ ರಾಗಿಣಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಇಂದು ಜಾಮೀನಿಗಾಗಿ ಕೋರ್ಟ್‌‌ನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.

ನಟಿ ರಾಗಿಣಿ ಈ ಹಿಂದೆಯೇ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಆ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ರಾಗಿಣಿ ಮುಂಬೈ ಮೂಲದ ವಕೀಲರೊಬ್ಬರಿಂದ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಅಲ್ಲದೇ ಪ್ರಕರಣದ ಐದನೇ ಆರೋಪಿ ವೈಭವ್‌ ಜೈನ್‌ ಪೊಲೀಸರಿಗೆ ಹೆದರಿ ಇದೀಗ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನು ನೀಡುವಂತೆ ನ್ಯಾಯಾಲಯದ ಎದುರು ಮನವಿ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿದೆ.

ಈ ನಡುವೆ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ, ಸಂಜನಾ, ರಾಹುಲ್, ಪ್ರಶಾಂತ್ ರಾಂಕಾ, ಲೂಮ್ ಪೆಪ್ಪರ್, ನಯೀಜ್ ರನ್ನು ಸಿಸಿಬಿ ಪೊಲೀಸರು ಡೋಪಿಂಗ್ ಟೆಸ್ಟ್ ಗೆ ಒಳಪಡಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

Related Articles

Back to top button