Latest

ನಟಿ ಸಂಜನಾ ಗಲ್ರಾಣಿ ಸಿಸಿಬಿ ಕಸ್ಟಡಿ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾಣಿ ಅವರ ಸಿಸಿಬಿ ಕಸ್ಟಡಿ ಅವಧಿಯನ್ನು ವಿಸ್ತರಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದ ಆರೋಪಿಗಳಾದ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ, ರಾಹುಲ್, ಪ್ರಶಾಂತ್ ರಂಕ, ಲೂಮ್ ಪೆಪ್ಪರ್, ನಯಾಜ್ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಎಲ್ಲಾ 6 ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಈ ವೇಳೆ ಸಂಜನಾ ಹೊರತು ಪಡಿಸಿ ಉಳಿದ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನಟಿ ಸಂಜನಾ ಅವರನ್ನು ಇನ್ನಷ್ಟು ದಿನಗಳ ಕಾಲ ವಿಚಾರಣೆ ನಡೆಸುವ ಅಗತ್ಯವಿರುವ ಹಿನ್ನಲೆಯಲ್ಲಿ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಆದರೆ ನ್ಯಾಯಾಲಯ 3 ದಿನಗಳ ಕಾಲ ಸಂಜನಾರನ್ನು ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

Related Articles

Back to top button