Latest

ಡ್ರಗ್ಸ್ ಮಾಫಿಯಾ ಪ್ರಕರಣ; ನಟಿ ಸಂಜನಾ ವಿಚಾರಣೆ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾಣಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ನಟಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಬಳಿಕ ನಟಿಯನ್ನು ಬಂಧಿಸುವ ಸಾಧ್ಯತೆಯಿದೆ.

ಬೆಳಿಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಜನಾ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು, ನಟಿ ಸಂಜನಾರನ್ನು ವಶಕ್ಕೆ ಪಡೆದು ಚಾಮರಾಜ ಪೇಟೆಯಲ್ಲಿನ ಸಿಸಿಬಿ ಕಚೇರಿಗೆ ಕರೆ ತಂದಿದ್ದಾರೆ. ಬಳಿಕ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ನಾಯಕ್ ನೇತೃತ್ವದಲ್ಲಿ ಸಂಜನಾ ವಿಚಾರಣೆ ಆರಂಭವಾಗಿದೆ.

Home add -Advt

ದಾಳಿ ವೇಳೆ ನಟಿಯ ಮೂರು ಮೊಬೈಲ್, ಲ್ಯಾಪ್ ಟಾಪ್ ಹಾಗೂ ಕೆಲ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಜನಾ ಜತೆಗೆ ಆಕೆಯ ತಂದೆ-ತಾಯಿಯನ್ನೂ ಸಿಸಿಬಿ ಪೊಲೀಸರು ಕಚೇರಿಗೆ ಕರೆತಂದಿದ್ದಾರೆ ಎನ್ನಲಾಗಿದೆ.

Related Articles

Back to top button