Latest

ಯಾರನ್ನೂ ಬಿಡೋದಿಲ್ಲ: ಗೃಹ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಜಾಲದ ಮೇಲೆ ಕೆಲ ದಿನಗಳಿಂದ ಸತತ ದಾಳಿ ನಡೆಸಲಾಗುತ್ತಿದೆ. ಕೆಲ ಸಿನಿಮಾ ನಟ-ನಟಿಯರು ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಮಾಫಿಯಾ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕೆಲ ನಟ-ನಟಿಯರು ಈ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಸ್ವಯಂ ಹೇಳಿಕೆ ಕೊಟ್ಟವರು ಮಹತ್ವದ ಸುಳಿವನ್ನು ನೀಡಿದ್ದಾರೆ ಎಂದರು.

Home add -Advt

ಸಾಕ್ಷಿ ಆಧಾರ ಇಟ್ಟುಕೊಂಡು ನೋಟಿಸ್ ಕೊಡುತ್ತೇವೆ. ಯಾವುದೇ ರಂಗದವರು ಇದ್ದರು ಯಾರನ್ನೂ ಬಿಡೋದಿಲ್ಲ. ಎಷ್ಟೇ ಪ್ರಭಾವಿಗಳು ಇದ್ದರು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ತಂತ್ರಜ್ಞಾನ ಬಳಸಿ ಎಲ್ಲೆಲ್ಲಿ ಸಪ್ಲೈ  ಆಗ್ತಿದೆ, ಆಗುತ್ತಿತ್ತು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ಕೇವಲ ಸಿಸಿಬಿ ಮಾತ್ರವಲ್ಲ, ಎಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕ್ರೈಂ ಬ್ರ್ಯಾಂಚ್ ಹೆಚ್ಚು ಜಾಗೃತವಾಗಿರುವಂತೆ ಸೂಚಿಸಿದ್ದೇವೆ. ಕಸ್ಟಮ್ಸ್ ಮತ್ತು ವಿಮಾನ ನಿಲ್ದಾಣಗಳಲ್ಲಿ ಎಲ್ಲಿಂದ ಸಪ್ಲೈ ಬರುತ್ತಿದೆ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದ್ದು, ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದೇವೆ ಎಂದು ವಿವರಿಸಿದರು.

 

Related Articles

Back to top button