
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯುವ ಪ್ರಶ್ನೆಯಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಪ್ರಭಾವಿಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಒತ್ತಡಕ್ಕೂ ಮಣಿಯಲ್ಲ ಎಂದರು.
ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ನಮ್ಮ ಸರ್ಕಾರ ಶಕ್ತಿ ಮೀರಿ ಪ್ರಯತ್ನ ಮಾಡಲಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ಮಾಫಿಯಾ ವಿರುದ್ಧ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ