Latest

ಡ್ರಗ್ಸ್ ದೇಶವನ್ನೂ ದುರ್ಬಲ ಮಾಡುತ್ತೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಮಾಫಿಯಾ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಡ್ರಗ್ಸ್ ಎನ್ನುವುದು ದೇಹವನ್ನು ಮಾತ್ರವಲ್ಲ ದೇಶವನ್ನು ಕೂಡ ದುರ್ಬಲ ಮಾಡುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಡ್ರಗ್ಸ್ ಎನ್ನುವುದು ದೇಹವನ್ನು ಮಾತ್ರವಲ್ಲ ದೇಶವನ್ನು ಕೂಡ ದುರ್ಬಲ ಮಾಡುತ್ತದೆ. ಆದ್ದರಿಂದ ಯಾವುದೇ ರೀತಿಯ ಡ್ರಗ್ಸ್ ದೇಹದಿಂದ ಮಾತ್ರವಲ್ಲ ದೇಶದಿಂದಲೂ ಎಷ್ಟು ದೂರ ಇಡಲು ಸಾಧ್ಯವೋ ಅಷ್ಟು ದೂರ ಇಡಲು ನಮ್ಮ ಪಕ್ಷದ ಕಾರ್ಯಕರ್ತರು ಯುವಜನಾಂಗದಲ್ಲಿ ಜಾಗೃತಿ ಮೂಡಿಸಬೇಕು ಎಂದಿದ್ದಾರೆ.

Home add -Advt

ಈ ಜಾಲವನ್ನು ಬುಡಸಮೇತ ಕಿತ್ತು ಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಕ್ತಿಮೀರಿ ಕೆಲಸ ಮಾಡುತ್ತಿವೆ. ನಮ್ಮ ಗೃಹ ಸಚಿವರು ಪೊಲೀಸ್ ಇಲಾಖೆಗೆ ಡ್ರಗ್ಸ್ ಜಾಲ ಮಟ್ಟ ಹಾಕಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕಲು ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ನಳಿನ್ ಬರೆದುಕೊಂಡಿದ್ದಾರೆ.

 

Related Articles

Back to top button