Latest

ಮತ್ತೋರ್ವ ಡ್ರಗ್ಸ್ ಪೆಡ್ಲರ್ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಡ್ರಗ್ಸ್ ಪೆಡ್ಲರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕೇರಳ ಮೂಲದ ನಿಜಾಯ್ ಎಂದು ತಿಳಿದುಬಂದಿದೆ. ಈತ ಹಲವಾರು ನಟ-ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಎನ್ನಲಾಗಿದೆ. ಬಂಧಿತನ ಮೊಬೈಲ್ ವಶ ಪಡಿಸಿಕೊಂಡಿರುವ ಸಿಸಿಬಿ ಪೊಲೀಸರು ಆತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಪೊಲೀಸರು ನಟಿ ರಾಗಿಣಿ, ರವಿಶಂಕರ್, ವಿರೇನ್ ಖನ್ನಾ ಸೇರಿದಂತೆ ಹಲವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Related Articles

Back to top button