
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನನ್ನ ಮಗಳ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳೂ ಸುಳ್ಳು, ನನ್ನ ಮಗಳು ಆರೋಪಗಳಿಂದ ಮುಕ್ತಳಾಗಿ ಹೊರಗೆ ಬರುತ್ತಾಳೆ ಎಂದು ನಟಿ ರಾಗಿಣಿ ದ್ವಿವೇದಿ ತಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಗಿಣಿ ತಾಯಿ ರೋಹಿಣಿ ದ್ವಿವೇದಿ, ಪ್ರಕರಣದಲ್ಲಿ ನನ್ನ ಮಗಳನ್ನು ಸಿಕ್ಕಿಸುವ ತಂತ್ರ ನಡೆದಿದೆ. ಮಗಳ ಮೇಲಿನ ಆರೋಪ ಸುಳ್ಳು. ಶೀಘ್ರದಲ್ಲೇ ರಾಗಿಣಿ ಎಲ್ಲಾ ಆರೋಪದಿಂದ ಮುಕ್ತಳಾಗಲಿದ್ದಾಳೆ ಎಂದು ತಿಳಿಸಿದ್ದಾರೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ನಿನ್ನೆ ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ಸಿಸಿಬಿ ದಾಳಿ ನಡೆದಿತ್ತು. ಈ ವೇಳೆ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಅಧಿಕಾರಿಗಳು ಸಂಜೆ ವೇಳೆಗೆ ಬಂಧಿಸಿದ್ದರು. ಸಧ್ಯ ರಾಗಿಣಿಯವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಡಲಾಗಿದೆ.