Latest

ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ: ಸಚಿವ ಶ್ರೀರಾಮುಲು

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಇಂದು ಇಡೀ ಯುವ ಪೀಳಿಗೆಯೇ ಡ್ರಗ್ಸ್ ಮಾಫಿಯಾದಲ್ಲಿ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಅವರು, ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರ ಡ್ರಗ್ಸ್ ಮಾಫಿಯಾದಲ್ಲಿಲ್ಲ. ಯುವ ಪೀಳಿಗೆಯೂ ಇದೆ. ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ಆಳವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಆಗಬೇಕು ಎಂಬ ನನ್ನ ಮಾತಿಗೆ ನಾನು ಬದ್ಧ. ಈಗಾಗಲೇ ನ್ಯಾ.ನಾಗಮೋಹನ ದಾಸ್ ವರದಿ ನೀಡಿದ್ದಾರೆ. ಇದರಲ್ಲಿ ಶೇ.5ರಷ್ಟು ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಆದರೆ ಅದು ಶೇ.7.5 ರಷ್ಟು ಮೀಸಲಾತಿ ಹೆಚ್ಚಳ ಆಗಬೇಕು. ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳವಾಗದಿದ್ದರೆ ಈ ಹಿಂದೆ ನಾನು ಮಾತು ನೀಡಿದಂತೆ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button