ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಈ ಪಿಡುಗಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಡ್ರಗ್ಸ್ ಮಾಫಿಯಾ ಇಡೀ ಯುವ ಜನಾಂಗವನ್ನೇ ನಾಶ ಮಾಡುವ ದಂಧೆ. ಪಕ್ಷ, ರಾಜಕೀಯ ಮೀರಿ ಎಲ್ಲರೂ ಕೈ ಜೋಡಿಸಿ ಈ ಮಾಫಿಯಾ ವಿರುದ್ಧ ಹೊರಾಡಬೇಕಿದೆ. ಇಲ್ಲವಾದಲ್ಲಿ ಇದು ಭಸ್ಮಾಸುರನಾಗಿ ಎಲ್ಲರನ್ನೂ ಸುಡಲಿದೆ ಎಂದರು.
ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ