Latest

ಬೆಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರ ದಾಳಿ; ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ 30 ಜನರು ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಸ್ವಲ್ಪ ತಣ್ಣಗಾಗಿದ್ದ ಡ್ರಗ್ಸ್ ಪಾರ್ಟಿ ಪ್ರಕರಣ ಇದೀಗ ಮತ್ತೆ ಆರಂಭವಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಮೇಲೆ ದಾಳಿ ನಡೆಸಿದ ಪೊಲೀಸರು ಡ್ರಗ್ಸ್ ಪಾರ್ಟಿಯಲ್ಲಿ ತೊಡಗಿದ್ದ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿದಂತೆ ಹಲವು ಯುವತಿಯರು ಸೇರಿ 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ದಿ ಪಾರ್ಕ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ಆಯೋಜನೆಗೊಂಡಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದವರಲ್ಲಿ ಬಾಲಿವುಡ್ ನಟರು, ಪ್ರಭಾವಿ ಮಕ್ಕಳು, ಕಾಲೇಜು ವಿದ್ಯಾರ್ಥಿನಿಯರು ಕೂಡ ಇದ್ದಾರೆ. ನಟ ಸಿಂಧಾಂತ್ ಕಪೂರ್ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರನಾಗಿದ್ದು, ವಶಕ್ಕೆ ಪಡೆದ ಪೊಲೀಸರು ಎಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ಶಿಕ್ಷಕ ಮತದಾರರಿಗೆ ಹಂಚಲು ಒಯ್ಯುತ್ತಿದ್ದ 17.40 ಲಕ್ಷ ರೂ. ವಶ: ಮೂವರ ಬಂಧನ

Related Articles

Back to top button