Kannada NewsKarnataka NewsLatest

*ಕ್ಯಾಂಡಿ ಪ್ಯಾಕೇಟ್ ಗಳಲ್ಲಿ ಡ್ರಗ್ಸ್: 9 ಕೋಟಿಗೂ ಅಧಿಕ ಮಾದಕ ವಸ್ತು ವಶಕ್ಕೆ ಪಡೆದ ಏರ್ ಪೋರ್ಟ್ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಂಡಿದೆ. ವಿದೇಶದಿಂದ ಕ್ಯಾಂಡಿ ಪ್ಯಾಕೇಟ್ ಗಳಲ್ಲಿ ಅಕ್ರಮವಾಗಿ ಡ್ರಗ್ಸ್ ಸಾಗಿಸುತ್ತಿದ್ದ ಪ್ರಯಾಣಿಕಒಬ್ಬನನ್ನು ಬೆಂಗಳೂರು ಏರ್ ಪೋರ್ಟ್ ನಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ನಡೆಸಿದ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಈ ಗಾಂಜಾದ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎನ್ನಲಾಗಿದೆ. ತಕ್ಷಣವೇ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದಾಗ ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಮಾದಕ ವಸ್ತು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಕ್ರಮವಾಗಿ ಡ್ರಗ್ಸ್ ಸಾಗಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ವೇಳೆ ಸುಮಾರು 1.7 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button