Latest

ಆನ್ ಲೈನ್ ಗೇಮ್ ನಿಷೇಧಿಸಿದ ಸರ್ಕಾರ

ಪ್ರಗತಿವಾಹಿನಿ ಸುದ್ದಿ; ವಿಜಯವಾಡ: ಆನ್ ಲೈನ್ ಗೇಮ್ ಗಳಿಂದ ಹೆಚ್ಚುತ್ತಿರುವ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ಆಲ್ ಲೈನ್ ಗೇಮ್ ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ.

ಆನ್ ಲೈನ್ ಗೇಮ್ ಗೆ ದಾಸರಾಗಿದ್ದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲದೇ ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದವು. ಇದರ ಬೆನ್ನಲ್ಲೇ ದಿಟ್ಟ ಕ್ರಮ ಕೈಗೊಂಡಿರುವ ಆಂದ್ರ ಸರ್ಕಾರ, ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧಿಸುವ ಬಗ್ಗೆ ವಿಧಾನಸಭೆಯಲ್ಲಿ ಮಸೂದೆ ಮಂಡನೆ ಮಾಡಿದೆ. ಧ್ವನಿಮತದ ಮೂಲಕ ಮಸೂದೆ ಮಂಡನೆಯಾಗಿದೆ.

 

Home add -Advt

Related Articles

Back to top button