*ಇನ್ಮುಂದೆ ಡ್ರಂಕ್ & ಡ್ರೈವ್ ತಪಾಸಣೆಗೆ ಹೊಸ ಕ್ರಮ; ಹಿರಿಯ ಅಧಿಕಾರಿಗಳಿಗೆ ಮಾತ್ರ ಅವಕಾಶ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಡಿದು ವಾಹನ ಚಲಾವಣೆ ಮಾಡುವವರ ತಪಾಸಣೆ ವಿಚಾರವಾಗಿ ಪೊಲಿಸ್ ಇಲಾಖೆ ಮಹತ್ವದ ಬದಲಾವಣೆಯನ್ನು ತಂದಿದ್ದು, ಇನ್ಮುಂದೆ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಗಳು ಡ್ರಂಕ್ & ಡ್ರೈವ್ ತಪಾಸಣೆ ಮಾಡುವಂತಿಲ್ಲ.
ಈ ಹಿಂದೆ ಡ್ರಂಕ್ & ಡ್ರೈವ್ ತಪಾಸಣೆಯಲ್ಲಿ ಎಸ್ ಎಸ್ ಐ, ಕಾನ್ಸ್ ಟೇಬಲ್ ಗಳು ಹಣ ವಸೂಲಿ ಮಾಡಿ, ಹಣ ಕೊಟ್ಟ ಬಗ್ಗೆ ಪಾವತಿ ಕೊಡದೇ ಕಳುಹಿಸುತ್ತಾರೆ. ಕೆಲ ಪೊಲೀಸ್ ಸಿಬ್ಬಂದಿಗಳು ಡ್ರಂಕ್ & ಡ್ರೈವ್ ತಪಾಸಣೆ ಹೆಸರಲ್ಲಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈಗ ಪೊಲೀಸ್ ಇಲಾಖೆ ಹೊಸ ನಿಯಮ ಜಾರಿಗೆ ತಂದಿದ್ದು, ಹಿರಿಯ ಅಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ನಡೆಸಬೇಕು ಎಂದು ತಿಳಿಸಿದೆ.
ಇನ್ಸ್ ಪೆಕ್ಟರ್ ಹಾಗೂ ಅವರ ಮೇಲಿನ ಅಧಿಕಾರಿಗಳು ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ಮಾಡಬೇಕು. ಈ ಬಗ್ಗೆ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಮೌಖಿಕವಾಗಿ ತಿಳಿಸಿದ್ದಾರೆ. ಅಲ್ಲದೇ ವಾರದಲ್ಲಿ 2 ದಿನ ಮಾತ್ರ ಡ್ರಂಕ್ & ಡ್ರೈವ್ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ