Kannada NewsLatestWorld

*ದುಬೈ ಏರ್ ಪೋರ್ಟ್ ಮೇಲೆ ಇರಾನ್ ದಾಳಿ*

ಪ್ರಗತಿವಾಹಿನಿ ಸುದ್ದಿ: ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ.

ಇರಾನ್ ದಾಳಿಯಿಂದ ಹಾರಾಟ ನಡೆಸುತ್ತಿದ್ದ ವಿಮಾನಗಳು, ಸಂಚರಿಸುತ್ತಿದ್ದ ಮೆಟ್ರೋ ರೈಲು ಸ್ವಲ್ಪದರಲ್ಲಿಯೇ ಅನಾಹುತದಿಂದ ತಪ್ಪಿದೆ. ವಿಮಾನ ನಿಲ್ದಾಣದ ಮೇಲೆ ದಾಳಿ ಬೆನ್ನಲ್ಲೇ ದುಬೈ ಏರ್ ಪೋರ್ಟ್ ನಲ್ಲಿ ವಿಮಾನ ಹಾರಾಟ ಸಂಪೂರ್ಣ ಸ್ಥಗಿತಗೊಂಡಿದೆ.

ಡ್ರೋನ್ ಬಿದ್ದಿರುವ ಜಾಗದಲ್ಲಿ ದಟ್ಟ ಹೊಗೆ ಆವರಿಸಿದ್ದು, ಸಾವು-ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ. ದುಬೈಗೆ ಆಗಮಿಸುವ ಹಾಗೂ ನಿರ್ಗಮಿಸುವ ಎಲ್ಲಾ ವಿಮಾನಗಳನ್ನು ಮುಂದಿನ ಸೂಚನೆವರೆಗೂ ಸ್ಥಗಿತಗೊಳಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button