Election NewsKannada NewsKarnataka NewsNationalPolitics

*ಇದೇ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಮೇಲೆ FIR ದಾಖಲಿಸಲು ಸೂಚನೆ*

ಪ್ರಗತಿವಾಹಿನಿ ಸುದ್ದಿ : ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.

ತಿಲಕ್ ನಗರ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ.

Home add -Advt

ಚುನಾವಣಾ ಬಾಂಡ್ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು (PCR) ದಾಖಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಕೋರ್ಟ್ FIR ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶ ಮಾಡಿದೆ. ಅಲ್ಲದೇ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್ ಮುಂದೂಡಿದೆ ಎಂದು ತಿಳಿದುಬಂದಿದೆ.

Related Articles

Back to top button