Kannada NewsKarnataka NewsLatest
*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಡಸ್ಟರ್ ಕಾರು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಹೆದ್ದಾರಿ ಮಧ್ಯೆಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಡಸ್ಟರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ವ್ಯಕ್ತಿ ತಕ್ಷಣ ಕಾರಿನಿಂದ ಕೆಳಗಿಳಿದು ಬಚಾವ್ ಆಗಿದ್ದಾರೆ. ಕ್ಷಣಾರ್ಧದಲ್ಲಿ ಕಾರು ಧಗ ಧಗನೆ ಹೊತ್ತಿ ಉರಿದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬಂದು ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಕರಕಲಾಗಿದೆ. ಕಾರಿನಲ್ಲಿ ಬೆಂಕಿ ಅವಘಡದಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಕುಂಸಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ