*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಡಸ್ಟರ್ ಕಾರು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಹೆದ್ದಾರಿ ಮಧ್ಯೆಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಡಸ್ಟರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ವ್ಯಕ್ತಿ ತಕ್ಷಣ ಕಾರಿನಿಂದ ಕೆಳಗಿಳಿದು ಬಚಾವ್ ಆಗಿದ್ದಾರೆ. ಕ್ಷಣಾರ್ಧದಲ್ಲಿ ಕಾರು ಧಗ ಧಗನೆ ಹೊತ್ತಿ ಉರಿದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬಂದು ಬೆಂಕಿ ನಂದಿಸಿದ್ದಾರೆ. ಆದರೆ ಕಾರು … Continue reading *ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಡಸ್ಟರ್ ಕಾರು*