Latest

ಡಿವೈಎಸ್ಪಿ ಲಕ್ಷ್ಮಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಿಐಡಿ ಡಿವೈಎಸ್ಪಿ ಲಕ್ಷ್ಮಿ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನ್ನಪೂರ್ಣೇಶ್ವರಿ ನಗರದ ವಿನಾಯಕ ಲೇಔಟ್ ನ ಸ್ನೇಹಿತನ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಕೋಲಾರ ಮೂಲದವರಾಗಿದ್ದ ಲಕ್ಷ್ಮಿ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಕೆಲಸ ಮಾಡುತ್ತಿದ್ದರು.

ಸ್ನೇಹಿತನ ಮನೆಯಲ್ಲಿ ರಾತ್ರಿ ಪಾರ್ಟಿ ಮುಗಿಸಿದ ನಂತರ ನೇಣಿಗೆ ಶರಣಾಗಿದ್ದಾರೆ. ಕೊಠಡಿಯೊಳಗೆ ತೆರಳಿದ್ದ ಅವರು ಎಷ್ಟೊತ್ತಾದರೂ ಬಾಗಿಲು ತೆರೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೊದರೂ ಪ್ರಯೋಜನವಾಗಲಿಲ್ಲ.

ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button