Kannada NewsKarnataka NewsLatest

*ಅಸಿಂಧು ಆದೇಶ ತಡೆಗೆ ಹೈಕೋರ್ಟ್ ನಕಾರ; ಪ್ರಜ್ವಲ್ ರೇವಣ್ಣ ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮ್ಮ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನಡೆಯಾಗಿದೆ.

ಚುನಾವಣಾ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಹೈಕೋರ್ಟ್, ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವವರೆಗೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Home add -Advt

ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ನಟರಾಜನ್, ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದೆ.

Related Articles

Back to top button