ಪ್ರಗತಿವಾಹಿನಿ ಸುದ್ದಿ: ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಕಚೇರಿಯಲ್ಲಿಯೇ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈ ಎಸ್ ಪಿ ರಾಮಚಂದ್ರಪ್ಪನನ್ನು ಸಸ್ಪೆಂಡ್ ಮಾಡಲಾಗಿದೆ.
ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲೆಂದು ಬಂದಿದ್ದ ಪಾವಗಡ ಮೂಲದ ಮಹಿಳೆಯೊಂದಿಗೆ ಡಿವೈ ಎಸ್ ಪಿ ರಾಮಚಂದ್ರಪ್ಪ ಬಲವಂತವಾಗಿ ರಾಸಲೀಲೆಯಲ್ಲಿ ತೊಡಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು.
ಡಿವೈ ಎಸ್ ಪಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈ ಎಸ್ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ದೂರು ನೀಡಲೆಂದು ಬಂದ ಮಹಿಳೆಯನ್ನು ವಿಚಾರಣೆ, ಮಾತುಕತೆ ನಡೆಸಬೇಕು ಎಂದು ಡೈವೈ ಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿ ಡಿವೈ ಎಸ್ ಪಿ ಲೈಂಗಿಕ ದೌರ್ಜನ್ಯವೆಸಗಿದ್ದು, ಇದನ್ನು ಯಾರೋ ಸ್ಥಳದಲ್ಲಿದ್ದವರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ದೂರು ನೀಡಲು ಬಂದ ಮಹಿಳೆಯೊಂದಿಗೆ ಡಿವೈ ಎಸ್ ಪಿಯ ಅಸಭ್ಯ ವರ್ತನೆ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ