Karnataka NewsLatestPolitics

*ಇ-ಖಾತಾ ಮಾಡಿಕೊಡಲು ಹಣಕ್ಕೆ ಬೇಡಿಕೆ: ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನ ಟಿ.ಸಿ.ಪಾಳ್ಯದಲ್ಲಿ ನಡಿಗೆ ಕಾರ್ಯಕ್ರಮದ ಮೂಲಕ ಸಾರ್ವಜನಿಕರ, ಸ್ಥಳೀಯ ನಿವಾಸಿಗಳ ಅಹ್ವಾಲು ಆಲಿಸಿದರು.

ಈ ವೇಳೆ ಇಕೋ ಪಾರ್ಕ್ ನಲ್ಲಿ ನಡೆದ ಸಂವಾದ ಕಾರ್ಯಕ್ರದಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಈ ವೇಳೆ ಇ-ಖಾತೆ ಮಾಡಿಕೊಡಲು ಕೆಲ ಅಧಿಕಾರಿಗಳು ಹಣ ಕೇಳುತ್ತಿದ್ದಾರೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಹೆಸರು ಹೇಳಿವಂತೆ ಡಿಸಿಎಂ ಕೇಳಿದರು.

ಈ ವೇಳೆ ಎಆರ್ ಒ ಬಸವರಾಜ್ ಹಾಗೂ ಆರ್ ಐ ವಿಜನಪುರ ವಿರುದ್ಧ 15 ಸಾವಿರ ಹಣ ಕೇಳುತ್ತಿದ್ದಾರೆ ಎಂದು ವ್ಯಕ್ತಿಯೋರ್ವರು ದೂರು ನೀಡಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button