Kannada NewsKarnataka NewsLatestPolitics

*ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧ: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅವರು ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳುÀ ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು.

ಇದೆ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಣೆ ಸಂಬಂಧ ಸಾಂಕೇತಿಕವಾಗಿ 10 ಜನರಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು. ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.

Home add -Advt

ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 60 ಪೌರ ಕಾರ್ಮಿಕರಿಗೆ ಮನೆಯ ಸ್ವಾಧೀನ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಸಾರ್ವಜನಿಕರ ಆಸ್ತಿ ದಾಖಲೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಇ-ಖಾತಾ ಸೇವೆ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸುವೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆಯ ಸಚಿವರು ಉತ್ತಮ ಕಾರ್ಯ ಮಾಡಿದ್ದಾರೆ ಎಂದರು.

ಪೌರ ಕಾರ್ಮಿಕರ ಸೇವೆ ಅತ್ಯಂತ ಅನನ್ಯವಾಗಿದ್ದು, ಅವರು ನೆಮ್ಮದಿಯಾಗಿರುವಂತೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ಮತ್ತು ಮನೆಯ ಹಕ್ಕುಗಳ ಪತ್ರ ವಿತರಣೆ ಮಾಡಿರುವುದು ರಾಜ್ಯ ಸರ್ಕಾರ ಮತ್ತು ಪೌರಾಡಳಿತ ಸಚಿವರ ಉತ್ತಮ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ವೇಳೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಭೈರತಿ ಸುರೇಶ ಅವರು ಮಾತನಾಡಿ, ಇ-ಆಸ್ತಿ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ಇ-ಖಾತಾ ನೀಡಲು 2016ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈವರೆಗೆ ಆಸ್ತಿ ಮಾಲೀಕರು ಇ-ಆಸ್ತಿ ತಂತ್ರಾಂಶದ ಮೂಲಕ ಅಂದಾಜು 29 ಲಕ್ಷ ಇ ಆಸ್ತಿಗಳಿಗೆ ಇ-ಖಾತಾ ಪಡೆದಿರುತ್ತಾರೆ. ಈ ಅಭಿಯಾನದ ಮುಂದುವರೆದ ಭಾಗವಾಗಿ ಇ-ಆಸ್ತಿ ತಂತ್ರಾಂಶವನ್ನು ಸರಳೀಕರಣಗೊಳಿಸಲಾಗಿದೆ. ಆಸ್ತಿ ಮಾಲೀಕರು ಯಾವುದೇ ಮಧ್ಯವರ್ತಿಗಳಿಲ್ಲದೇ ಹಾಗೂ ಯಾವುದೇ ಅಧಿಕಾರಿ ಸಿಬ್ಬಂದಿಯನ್ನು ಸಂಪರ್ಕಿಸದೇ ತಮ್ಮ ಮನೆಯಲ್ಲಿ ಕುಳಿತು ಸರಳವಾಗಿ ಸುಲಭವಾಗಿ ಇ-ಖಾತಾ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಈ ಗೃಹಭಾಗ್ಯ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪೌರಕಾರ್ಮಿಕರ ವಿಶೇಷ ನೇಮಕಾತಿ: ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 127 ಮತ್ತು ವಿಜಯಪುರದಲ್ಲಿ 66 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿರುವುದು ಸಂತಸದ ವಿಚಾರ. ಇನ್ನೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣಿಕೀಕೃತ ಖಾತಾ ನೀಡುವ ಉದ್ದೇಶದಿಂದ 2016 ರಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. 2019 ರಿಂದ ಮಹಾನಗರಪಾಲಿಕೆಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು 29 ಲಕ್ಷ ಇ-ಖಾತಾಗಳನ್ನು ಸೃಜಿಸಲಾಗಿದೆ. ಇದರಲ್ಲಿ 25,03,385 ಎ-ಖಾತಾ ಮತ್ತು 4,39,889 ಬಿ-ಖಾತಾಗಳು ಸೇರಿವೆ ಎಂದರು.

ಅಧಿಕೃತ ಆಸ್ತಿಗಳ ಜೊತೆಗೆ, ಕಂದಾಯ ಭೂಮಿ ಮತ್ತು ಅನುಮೋದನೆಯಾಗದ ಬಡಾವಣೆಗಳಲ್ಲಿನ ಆಸ್ತಿಗಳಿಗೂ ಇ-ಖಾತಾ ನೀಡಲು ಕಾಯ್ದೆಗೆ ತಿದ್ದುಪಡಿ ತಂದು ಬಿ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 10-09-2024ರ ಪೂರ್ವದಲ್ಲಿ ನೋಂದಣಿಯಾದ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಅವಕಾಶವಿದೆ. ನಾಗರಿಕರು ತಮ್ಮ ಆಸ್ತಿ ವಿವರಗಳನ್ನು ಆನ್ಲೈನ್ನಲ್ಲಿ ವೀಕ್ಷಿಸಿ, ವಿವರಗಳು ಸರಿಯಿದ್ದರೆ ನೇರವಾಗಿ ಅಂತಿಮ ಇ-ಖಾತೆಯನ್ನು ಪಡೆಯಬಹುದು. ವ್ಯತ್ಯಾಸಗಳಿದ್ದಲ್ಲಿ ಆನ್ಲೈನ್ ಮೂಲಕವೇ ಮಾಹಿತಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು ಎಂದರು.

ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಪರಿಶೀಲಿಸುತ್ತವೆ. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಅದರಂತೆ ಈಗಾಗಲೇ ಸಾವಿರಾರು ಫಲಾನುಭವಿಗಳಿಗೆ ಮನೆ ಕೊಡುವ ಕಾರ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಬಡವರ ಮೇಲಿನ ಕಾಳಜಿಯಿಂದಾಗಿ ಮಾನ್ಯ ಮುಖ್ಯಮಂತ್ರಿಗಳು ಈ ಬಾರಿ ಮತ್ತೆ 180 ಹೊಸ ಇಂದಿರಾ ಕ್ಯಾಂಟಿನ್ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸಿಫ್ ಸೇಠ್ ಅವರು ಮಾತನಾಡಿದರು. ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಪೊನ್ನಣ್ಣ, ಕೂಡ್ಲಿಗಿ ಶಾಸಕ ಶ್ರೀನಿವಾಸ, ವಿಧಾನಪರಿಷತ್ ಸದಸ್ಯರಾದ ಸಲೀಂ ಅಹ್ಮದ್, 

ನಸೀರ್ ಅಹ್ಮದ್  , ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಮಂಗೇಶ ಪವಾರ, ಉಪ ಮಹಾಪೌರರಾದ ವಾಣಿ ಜೋಶಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುμÁರ ಗಿರಿನಾಥ, ಸರ್ಕಾರದ ಕಾರ್ಯದರ್ಶಿಗಳಾದ ದೀಪಾ ಚೋಳನ್ ಸೇರಿದಂತೆ ಪ್ರಭುಲಿಂಗ ಕವಳಿಕಟ್ಟಿ, ಡಾ.ಸೆಲ್ವಮಣಿ ಆರ್ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರು ಮತ್ತು ಇನ್ನೀತರರು ಉಪಸ್ಥಿತರಿದ್ದರು.

Related Articles

Back to top button