Wanted Tailor2
Cancer Hospital 2
Bottom Add. 3

*ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಹ್ಯಾಕ್ ಕೇಸ್; ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ ಹ್ಯಾಕ್ ಮಾಡಿ ಕೋಟ್ಯಂತರ ಹಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಎಸ್ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್ ಐಟಿ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ಸಂಪರ್ಕವಿತ್ತು ಎನ್ನಲಾಗಿದೆ.

ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ( ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಹ್ಯಾಕ್ ಮಾಡಿ 11.5 ಕೋಟಿ ಹಣ ಲೂಟಿ ಮಾಡಿದ್ದರು. ಈ ಪ್ರಕರಣದ ತನಿಖೆ ಆರಂಭಿಸಿದ ಸಿಐಡಿ ಎಸ್ ಐಟಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಿತಿನ್ ಮೆಶ್ರಾಮ್, ದರ್ಶಿತ್ ಪಟೇಲ್ ಬಂಧಿತ ಆರೋಪಿಗಳು.


Bottom Add3
Bottom Ad 2

You cannot copy content of this page