Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಕಡಾಡಿ ಕೋರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದ್ದಾರೆ.

Home add -Advt


ನವದೆಹಲಿಯಲ್ಲಿ ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ಅವರನ್ನು ಭೇಟಿ ಮಾಡಿದ ಕಡಾಡಿ ಅವರು, ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಸ್ಥಳವನ್ನು ಗುರುತಿಸಿದ್ದು, ಆ ಸ್ಥಳದಲ್ಲಿ ಆದಷ್ಟು ಬೇಗ ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.


ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಡಾಡಿ ತಿಳಿಸಿದ್ದಾರೆ.

Related Articles

Back to top button