*ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಕಡಾಡಿ ಕೋರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ಅವರನ್ನು ಭೇಟಿ ಮಾಡಿದ ಕಡಾಡಿ ಅವರು, ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಸ್ಥಳವನ್ನು ಗುರುತಿಸಿದ್ದು, ಆ ಸ್ಥಳದಲ್ಲಿ ಆದಷ್ಟು ಬೇಗ ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಡಾಡಿ ತಿಳಿಸಿದ್ದಾರೆ.Home add -Advt *ಬಡವರಿಗೆ 2 ಕೋಟಿ … Continue reading *ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಕಡಾಡಿ ಕೋರಿಕೆ*