HealthKannada NewsLatestWorld

*ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಎಂಟ್ರಿ: ಎಬೋಲಾ ವೈರಸ್ ಗೆ ಇಲ್ಲ ಲಸಿಕೆ, ಚಿಕಿತ್ಸೆ; WHO ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಕೊರೊನಾ ಮಹಾಮಾರಿ ಬಳಿಕ ಇದೀಗ ಮತ್ತೊಂದು ಮಾರಣಾಂತಿಕ ಎಬೋಲಾ ವೈರಸ್ ಎಂಟ್ರುಕೊಟ್ಟಿದ್ದು, ಪ್ರಪಂಚದಾದ್ಯಂತ ಆತಂಕ ಸೃಷ್ಟಿಸಿದೆ. ಈಗಾಗಲೇ ಆಫ್ರಿಕಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ವೈರಸ್ ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಇದು ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ.

ಎಬೋಲಾ ವೈರಸ್ ಬುಂಡಿಬುಗ್ಯೊ ತಳಿಗೆ ಸೇರಿದ್ದಾಗಿದ್ದು, ಈ ವೈರಸ್ ಹರಡಿದರೆ ಯಾವುದೇ ಲಸಿಕೆಯಾಗಲಿ,ಚಿಕಿತ್ಸೆಯಾಗಲಿ ಲಭ್ಯವಿಲ್ಲ. ಅಲ್ಲದೇ ಈ ವೈರಸ್ ನಿಂದ ಸಾವಿನ ಪ್ರಮಾಣವೂ ಹೆಚ್ಚು. ಆಫ್ರಿಕಾದಲ್ಲಿ ವೇಗವಾಗಿ ಹರಡುತ್ತಿರುವ ಎಬೋಲಾ ವೈರಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸಿದೆ.

Home add -Advt

ಭಾರತದಲ್ಲಿಯೂ ಎಬೋಲಾ ಭೀತಿ ಶುರುವಾಗಿದೆ. ಕಾರಣ ಕಾಂಗೋ, ಉಗಾಂಡ ಮತ್ತು ಇತರೆ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಸ್ಕ್ರೀನಿಂಗ್ ಜೊತೆಗೆ, ಅಗತ್ಯವಿದ್ದರೆ ಆಫ್ರಿಕಾ ಪ್ರವಾಸಿಗರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡುವುದು ದೇಶದ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅವಶ್ಯಕವಾಗಿದೆ.

ಎಬೋಲಾ ವೈರಸ್ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ ನೇರ ಸಂಪರ್ಕ ಅಗತ್ಯವಾಗುತ್ತದೆ. ಕೋವಿಡ್ ಮಹಾಮಾರಿಯಂತೆ ಗಾಳಿಯಲ್ಲಿ ಅತಿ ವೇಗವಾಗಿ ಹರಡುವ ಸಾಧ್ಯತೆ ಕಡಿಮೆ.

ಈ ರೋಗದ ಲಕ್ಷಣವೆಂದರೆ ಆರಂಭದಲ್ಲಿ ತೀವ್ರ ಜ್ವರ, ತಲೆನೋವು, ಮೈಕೈನೋವು, ವಾಂತಿ ಮತ್ತು ಭೇದಿ ಕಂಡುಬರುತ್ತದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಲಿವರ್ ಮತ್ತು ಶ್ವಾಸಕೋಶದ ವೈಫಲ್ಯವುಂಟಾಗಿ ಸಾವು ಸಂಭವಿಸಬಹುದು.


Related Articles

Back to top button