
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆದ ಬೆನ್ನಲ್ಲೆ ರಾಜ್ಯಕ್ಕೆ ಜಾರಿ ನಿರ್ದೇಶನಾಲಯದ ನಿರ್ದೇಶಕ ರಾಹುಲ್ ನವೀನ್ ಅವರು ದಿಢೀರ್ ಬೆಂಗಳೂರಿಗೆ ಆಗಮಿಸಿದ್ದು, ಭಾರಿ ಕುತೂಹಲ ಮೂಡಿಸಿದೆ
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಕೆಪಿಎಸ್ಸಿ ನೇಮಕಾತಿ ಅಕ್ರಮ, ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಇಡಿ ದಾಳಿ, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಗಳ ತನಿಖೆಯ ಪ್ರಗತಿ ಪರಿಶೀಲನೆ ನಡೆಸಲು ಅವರು ಖುದ್ದು ಅಖಾಡಕ್ಕಿಳಿದಿದ್ದಾರೆ.
ಎರಡು ದಿನಗಳ ಕಾಲ ಬೆಂಗಳೂರಿನಲ್ಲೇ ತಂಗಲಿರುವ ಅವರು, ಎರಡು ರಾಜ್ಯಗಳಿಗೆ ಸಂಬಂಧಿಸಿದ ಪ್ರಮುಖ ಪ್ರಕರಣಗಳ ಪ್ರಗತಿ ಪರಿಶೀಲನೆಯನ್ನು ಹಿರಿಯ ಅಧಿಕಾರಿಗಳೊಂದಿಗೆ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


