Kannada NewsKarnataka NewsNationalPolitics

*ಮಾಜಿ ಸಚಿವ ನಾಗೇಂದ್ರ ಮನೆ ಸೇರಿದಂತೆ 18 ಕಡೆ ದಾಳಿ ನಡೆಸಿದ ಇಡಿ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ದದ್ದಲ್ ಮನೆ  ಸೇರಿದಂತರ ಒಟ್ಟು 18 ಕಡೆ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ನಾಗೇಂದ್ರ ಅವರ ಬಳ್ಳಾರಿ‌ ನೆಹರೂ ಕಾಲೋನಿ ಮತ್ತು ಬೆಂಗಳೂರಿನ ಬಿಇಎಲ್ ಸಮೀಪವಿರುವ ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. ಸ್ಥಳೀಯ ಪೊಲೀಸರ ನೆರವಿಲ್ಲದೆ ಸಿಆರ್‌ಪಿಎಫ್‌ ಜೊತೆ ಸೇರಿ ದಾಳಿ ನಡೆಸಿದೆ.

Home add -Advt

ಬೆಳ್ಳಂಬೆಳಗ್ಗೆ ಬೆಂಗಳೂರು, ಬಳ್ಳಾರಿ ಮತ್ತು ರಾಯಚೂರು ಸೇರಿದಂತೆ 18 ಕಡೆ ದಾಳಿ ಮಾಡಲಾಗಿದ್ದು, ಹಗರಣಕ್ಕೆ ಸಂಬಂಧಿಸಿದ ಅಧಿಕಾರಗಳ ಮನೆಯನ್ನು ಪರಿಶೀಲಿಸಲಾಗಿದೆ. ವಾಲ್ಮಿಕಿ ಅಭಿವೃದ್ದಿ ನಿಗಮ ಮಂಡಳಿಯಲ್ಲಿ ಐವರು ಇಡಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಬೆಳಿಗ್ಗೆ 3:30 ಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಉದ್ಯೋಗಿ ದೀಪ ಎಂಬುವವರ ಮನೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೀಪ ಅವರ ವಿಜಯನಗರದ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ನಡೆಸಿ ದಾಖಲೆಗಳಿಗಾಗಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ. 

Related Articles

Back to top button