Karnataka NewsPolitics

*ಸಂಸದರು, ಶಾಸಕರಿಗೆ ED ಬಿಗ್ ಶಾಕ್: ಬೆಳ್ಳಂ ಬೆಳಿಗ್ಗೆ ಮನೆ, ಕಚೇರಿ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ: ಸಂಸದರು, ಶಾಸಕರು, ಜನಪ್ರತಿನಿಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಾಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬಳ್ಳಾರಿ ಸಂಸದ ಇ.ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಶಾಸಕ ಬಿ.ನಾಗೇಂದ್ರ ಅವರ ಆಪ್ತ ಗೋವರ್ಧನ್ ರೆಡ್ಡಿ ಸೇರಿದಂತೆ ಹಲವರ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

Related Articles

ದಾಳಿ ವೇಳೆ ಸಂಸದರು, ಶಾಸಕರು ತಮ್ಮ ನಿವಾಸದಲ್ಲಿಯೇ ಇದ್ದರು ಎನ್ನಲಾಗಿದೆ. ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಣಕಾಸು ಹಗರಣದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆದಿದೆ ಎನ್ನಲಾಗಿದೆ.

Home add -Advt

ಸಂಸದ ತುಕಾರಾಮ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

Related Articles

Back to top button