ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಕ್ಷಣಗಣೆ ಆರಂಭವಾಗಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಾರ್ಖಂಡ್ ನಲ್ಲಿ ಬೃಹತ್ ದಾಳಿ ನಡೆಸಿದ್ದು, 21 ಕೋಟಿಗೂ ಅಧಿಕ ಹಣ ಜಪ್ತಿ ಮಾಡಿದ್ದಾರೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಬರೋಬ್ಬರಿ 21 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ.
ಸಚಿವರ ಆಪ್ತ ಕಾರ್ಯದರ್ಶಿ ಸಂಜಯ್ ಲಾಲಾ ನಿವಾಸ, ಕಚೇರಿ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಚಿವರ ಆಪ್ತ ಕಾರ್ಯದರ್ಶಿಯ ಮನೆಯಲ್ಲಿ ಬ್ಯಾಗ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಚುನಾವಣೆ ವೇಳೆ ಹಂಚಲು ಹಣ ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ. 21 ಕೋಟಿಗೂ ಅಧಿಕ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ