Kannada NewsKarnataka NewsLatestPolitics

*ಅಚ್ಚರಿ ಮೂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಮ್ಮದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಮೈಸೂರುನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯ. ಹೈಕಮಾಂಡ್ ನವರು ನೀನಿ ಸಿಎಂ ಆಗು ಎಂದರೆ ನಾನು ಕೂಡ ಸಿಎಂ ಆಗಲು ಸಿದ್ಧ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Home add -Advt

ಅಭಿಪ್ರಾಯಗಳನ್ನು ಹೇಳಲು ಎಲ್ಲರಿಗೂ ಸ್ವಾತಂತ್ರ್ಯವಿದೆ. ಅದರಲ್ಲಿ ತಪ್ಪೇನು? ಸಿಎಂ ಆಗಿ ಯಾವು ಮುಂದುವರೆಯಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಯಲ್ಲಿ ನಾಲ್ವರು ನಾಯಕರು ಈಗಾಗಲೇ ಚರ್ಚಿಸಿದ್ದಾರೆ. ಆ ನಾಲ್ವರು ನಾಯಕರಿಗೆ ಮಾತ್ರ ಎಲ್ಲ ಸ್ಪಷ್ಟತೆಗಳು ಇವೆ. ಉಳಿದಂತೆ ಎಲ್ಲರೂ ಅವರವರವ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.


Related Articles

Back to top button