Karnataka NewsLatestPolitics

*ನನ್ನ ಮೇಲೂ ಇಡಿ ದಾಳಿ ನಡೆಯಬಹುದು ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ನನ್ನ ಮೇಲೂ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಬಹುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಅಗ್ಖೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕೇಂದ್ರ ತನಿಖಾ ಸಂಸ್ಥೆಗಳಾದ ಐಟಿ, ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಕಳೆದ 12 ವರ್ಷಗಳಲ್ಲಿ ದೇಶಾದ್ಯಂತ ಸಾವಿರಾರು ಇಡಿ ದಾಳಿಗಳು ನಡೆದಿವೆ. ಆದರೆ, ಈ ದಾಳಿಗಳಲ್ಲಿ ಅಪರಾಧ ಸಾಬೀತಾದ ಪ್ರಕರಣಗಳ ಪ್ರಮಾಣ ಶೇಕಡಾ 2 ಕ್ಕಿಂತಲೂ ಕಡಿಮೆ, ಅಂದರೆ ಶೇಕಡಾ 1.5 ಕ್ಕಿಂತಲೂ ಕಡಿಮೆ ಇದೆ. ಈ ಅಂಕಿಅಂಶಗಳು ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ ಎಂದರು.

ಯಾವಾಗ ಬೇಕೋ ಆವಾಗ ಛೂ ಬಿಡ್ತಾರೆ ಎಂದು ಕೇಂದ್ರ ಸಂಸ್ಥೆಗಳ ಕಾರ್ಯವೈಖರಿಯನ್ನು ಖಂಡಿಸಿದ ಖರ್ಗೆ, ತಮ್ಮ ಮೇಲೂ ಇಡಿ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button