
ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಇಡಿ ಅಧಿಕಾರಿಗಳು ಸಚಿವರ ಆಪ್ತರ ಮನೆಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.
ಇಡಿ ಅಧಿಕಾರಿಗಳ ತಂಡ ಬೆಂಗಳೂರಿನ ವಿವಿಧೆಡೆ ಪ್ರತಿಷ್ಠಿತ ಬಿಲ್ಡರ್, ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಸಚಿವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದೆ.
ಪ್ರತಿಷ್ಠಿತ ಬಿಲ್ಡರ್ಸ್, ರಿಯಲ್ ಎಸ್ಟೇಟ್ ಉದ್ಯಮಿಗಳ ಜತೆ ಕೆಲ ಸಚಿವರ ಆಪ್ತರ ನಿವಾಸಗಳ ಮೇಲೂ ಸಹ ಇಡಿ ದಾಳಿಯಾಗಿದೆ ಎಂದು ತಿಳಿದುಬಂದಿದ್ದು, ಯಾವ್ಯಾವ ಸಚಿವರ ಆಪ್ತರ ಮೇಲೆ ದಾಳಿಯಾಗಿದೆ ಎಂದು ತಿಳಿದು ಬಂದಿಲ್ಲ.
ಸಿಎಂ ಕುರ್ಚಿ ಸಂಬಂಧ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಈ ಸಂಬಂಧ ಕರ್ನಾಟಕ ಕಾಂಗ್ರೆಸ್ನನಲ್ಲಿ ಮಹತ್ವದ ರಾಜಕೀಯ ಬೆಳಗಣಿಗಳು ನಡೆಯುತ್ತಿವೆ. ಸಚಿವರು, ಶಾಸಕರು ಏನಾಗುತ್ತೋ ಎನ್ನುವ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಈ ಬೆಳವಣಿಗೆಗಳ ನಡುವೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.




