
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೀಡಿದ್ದ ಸಮನ್ಸ್ ಗೆ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ.
ಇಡಿ ಸಮನ್ಸ್ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಹಿಂದೆ ಸಮನ್ಸ್ ಗೆ ತಡೆಯಾಜ್ಞೆ ನೀಡಿತ್ತು. ಇಂದು ನಡೆದ ಅರ್ಜಿ ವಿಚಾರಣೆ ವೇಳೆ ಸಿಎಂ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಪರ ವಕೀಲರ ವಾದ ಮಂಡನೆ ಆಲಿಸಿದ ಹೈಕೋರ್ಟ್ ಫೆ.20ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ.
ಅಲ್ಲದೇ ಫೆ.20ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.