ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಇಡಿ ವಿಚಾರಣೆ ಮುಗಿದಿದ್ದು, ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿರುವುದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಇಂದು ನವದೆಹಲಿಯಲ್ಲಿ ಇಡಿ ಕಚೇರಿಗೆ ಹಾಜರಾಗಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಯಂಗ್ ಇಂಡಿಯಾಗೆ ನೀಡಿದ ದೇಣಿಗೆ ಬಗ್ಗೆ ಮಾಹಿತಿ ಕೇಳಿದರು. ಇಡಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆ ಯಾವುದೇ ಪ್ರಶ್ನೆಯನ್ನೀ ಇಡಿ ಅಧಿಕಾರಿಗಳು ಕೇಳಿಲ್ಲ ಎಂದರು.
ಈ ವರ್ಷ ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿದ್ದೆ. ಈ ಬಗ್ಗೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ನಮ್ಮ ಕಂಪನಿಗಳಿಗೆ ಸೇರಿದ ಮತ್ತಷ್ಟು ದಾಖಲೆ ನೀಡುವಂತೆ ಕೇಳಿದ್ದಾರೆ. ದಾಖಲೆ ಸಲ್ಲಿಸಲು ಕಾಲಾವಕಾಶ ಕೇಳಿದ್ದೇವೆ. ಇಡಿ ಅಧಿಕಾರಿಗಳು ಒಪ್ಪಿದ್ದಾರೆ. ಎಲ್ಲಾ ದಾಖಲೆಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಇಡಿ ಅಧಿಕಾರಿಗಳು ಕೇಳಿದ ಎಲ್ಲಾ ದಾಖಲೆಗಳನ್ನು ಶೀಘ್ರದಲ್ಲಿ ಸಲ್ಲಿಸಲಾಗುವುದು ಎಂದು ಹೇಳಿದರು.
ಪೇಸಿಎಂ ಪೋಸ್ಟರ್ ಅಂಟಿಸುವವರೆಗೂ ಸರ್ಕಾರ ಏನು ಮಾಡ್ತಿತ್ತು? ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಕ್ರೋಶ
https://pragati.taskdun.com/politics/paycm-posterarun-singhbjp-core-committee-meeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ