Film & Entertainment

*ಮನಿ ಲಾಂಡರಿಂಗ್ ಕೇಸ್ ನಲ್ಲಿ ನಟ ಮಹೇಶ್ ಬಾಬುಗೆ ಇಡಿ ಸಮನ್ಸ್*

ಪ್ರಗತಿವಾಹಿನಿ ಸುದ್ದಿ : ತೆಲಗು ಚಿತ್ರರಂಗದ ಖ್ಯಾತ ನಟ ಮಹೇಶ ಬಾಬು ಅವರು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದೆ.

ಮನೆ ಖರೀದಿದಾರರಿಗೆ ವಂಚಿಸಿದ ಆರೋಪದ ಮೇಲೆ ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಇದೀಗ ನಟ ಮಹೇಶ್ ಬಾಬುಗೆ ಇಡಿ ಸಮನ್ಸ್ ನೀಡಿದೆ.

ಕಂಪೆನಿಯನ್ನು ಅನುಮೋದಿಸಿದ್ದಕ್ಕಾಗಿ ಮಹೇಶ್ ಬಾಬು 2.5 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಇದು ಅಪರಾಧದ ಆದಾಯವಾಗಿರಬಹುದು ಎಂಬ ಕಾರಣಕ್ಕೆ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button