
ಪ್ರಗತಿವಾಹಿನಿ ಸುದ್ದಿ: ಅಕ್ರಮ ಹಣ ವರ್ಗಾವಣೆ ಹಾಗೂ ಇತರೆ ಆರೋಪದಡಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡನನ್ನು ವಿಚಾರಣೆಗೆಂದು ಕರೆಸಿಕೊಂಡಿದ್ದ ಇಡಿ ಸತತ 12 ಗಂಟೆ ವಿಚಾರಣೆ ನಡೆಸಿ, ಇದೀಗ ವಶಕ್ಕೆ ಪಡೆದಿದೆ.
ನಿನ್ನೆ ಅಪೆಕ್ಸ್ ಬ್ಯಾಂಕ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಿ ಬಳಿಕ ಶಾಂತಿ ನಗರದ ಇ.ಡಿ ಮುಖ್ಯ ಕಚೇರಿಗೆ ಕರೆದೊಯ್ಯಲಾಗಿತ್ತು. ಇಂದು ಮಂಜುನಾಥ್ ಗೌಡನನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿರುವ ಇಡಿ ಬಳಿಕ ವಿಚಾರಣೆಗಾಗಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಪಡೆಯಲಿದೆ.
ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಪಡೆದಿದ್ದ ಪ್ರಕರಣದಲ್ಲಿ ಇ.ಡಿ ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ದಾಳಿ ನಡೆಸಿತ್ತು. ಪ್ರಕರಣದಲ್ಲಿ ಮಂಜುನಾಥ್ ಗೌಡ ಕೈವಾಡ ಇರುವ ಕುರಿತು ಸಾಕ್ಷಾಧಾರಗಳು ಪತ್ತೆಯಾದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.