ಪ್ರಗತಿವಾಹಿನಿ ಸುದ್ದಿ; ರಾಂಚಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ ಘಡ ಮುಖ್ಯಮಂತ್ರಿಗಳ ಉಪಕಾರ್ಯದರ್ಶಿಯನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಬಂಧಿಸಿದ್ದಾರೆ.
ಛತ್ತೀಸ್ ಘಡ ಸಿಎಂ ಭೂಪೇಶ್ ಬಘೇಲ್ ಅವರ ಅವರ ಡೆಪ್ಯೂಟಿ ಸಕ್ರೆಟರಿ ಐಎ ಎಸ್ ಅಧಿಕಾರಿ ಸೌಮ್ಯ ಚೌರಾಸಿಯಾ ಅವರನ್ನು ಬಂಧಿಸಲಾಗಿದೆ. ಈ ಮೂಲಕ ಕಲ್ಲಿದ್ದಲು ಹಗರಣ ಸಿಎಂ ಕಚೇರಿಗೂ ತಲುಪಿದಂತಾಗಿದೆ.
ಇಲ್ಲಿಗಲ್ ಮೈನಿಂಗ್ ಪ್ರಕರಣ ಸಂಬಂಧ ಸೌಮ್ಯಾ ಚೌರಾಸಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೆ ಇದೀಗ ಇಡಿ ಅಧಿಕಾರಿಗಳು ಸೌಮ್ಯ ಚೌರಾಸಿಯಾ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕಲ್ಲಿದ್ದಲು ಹಗರಣದಲ್ಲಿ 500 ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ.
‘ಮಹಾ’ ಸಚಿವರಿಗೆ ಗಡಿ ಪ್ರವೇಶಕ್ಕೆ ಅವಕಾಶ ನೀಡದಂತೆ ಒತ್ತಾಯ; ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕರವೇ ಕಾರ್ಯಕರ್ತರು
https://pragati.taskdun.com/karavecm-basavaraj-bommaimeetbelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ