Kannada NewsKarnataka NewsLatest
*ಬೆಳಗಾವಿ: KRIDL ಇಂಜಿನಿಯರ್ ತಿಮ್ಮರಾಜಪ್ಪ ಮನೆ ಮೇಲೂ ಲೋಕಾಯುಕ್ತ ದಾಳಿ*

ಅಪಾರ ಪ್ರಮಾಣದ ಆಸ್ತಿಗಳು ಪತ್ತೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಇಲಾಖೆಗಳ ಅಧಿಕಾರಿಗಳ ಮೇಲೆ ದಾಳಿ ನಡೆಸಲಾಗಿದೆ.
ಕೆಆರ್ ಐಡಿ ಎಲ್ ಇಂಜಿನಿಯರ್ ತಿಮ್ಮರಾಜಪ್ಪ ಅವರ ಮನೆಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ, ಬೆಂಗಳೂರು, ಕೋಲಾರ ಸೇರಿದಂತೆ ಹತ್ತು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ತಿಮ್ಮರಾಜಪ್ಪ ಅವರಿಗೆ ಸೇರಿದ ಅಪಾರ ಪ್ರಮಣದ ಆಸ್ತಿಗಳು ಲೋಕಾಯುಕ್ತ ದಾಳಿ ವೇಳೆ ಪತ್ತೆ ಆಗಿದೆ. ಬೆಂಗಳೂರು ನಗರದಲ್ಲಿಯೇ 7 ಐಷಾರಾಮಿ ಬಂಗಲೆ, 3 ಫ್ಲ್ಯಾಟ್, ಹುಟ್ಟೂರು ಕೋಲಾರ ಜಿಲ್ಲೆಯ ಮಹದೇವಪುರದಲ್ಲಿಯೂ ಮೂರು ಅಂತಸ್ತಿನ ಮನೆ ಪತ್ತೆಯಾಗಿದೆ.
ಸದ್ಯ ತಿಮ್ಮರಾಜಪ್ಪ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.




