Kannada NewsKarnataka NewsLatestPolitics

*ಎಸ್ ಐಟಿ ಚಾರ್ಜ್ ಶೀಟ್ ಬೆನ್ನಲ್ಲೇ EDಯಿಂದ ನಲಪಾಡ್ ಗೆಸಮನ್ಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ ಐಟಿ ಮೊಹಮ್ಮದ್ ನಲಪಾಡ್ ಸೇರಿ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಇಡಿ ಅಧಿಕಾರಿಗಳು ಮೂರನೇ ಬಾರಿ ನಲಪಾಡ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Home add -Advt

ಈಗಾಗಲೇ ಇಡಿ ಅಧಿಕಾರಿಗಳು ಮೊಹಮ್ಮದ್ ನಲಪಾಡ್ ಗೆ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಆದರೆ ಸರ್ಕಾರ ರಚನೆಯ ಕಾರಣಗಳನ್ನು ಹೇಳಿ ನಲಪಾಡ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬಾರಿಗೆ ಸಮನ್ಸ್ ನೀಡಿದ್ದಾರೆ.

ಇನ್ನು ಬಿಟ್ ಕಾಯಿನ್ ಹಗರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಹಗರಣದ ಕಿಂಗ್ ಪಿನ್ ಶ್ರೀಕಿ, ರಾಬಿನ್ ಖಂಡೆವಾಲಾ, ಮೊಹಮ್ಮದ್ ನಲಪಾಡ್ ಸೇರಿದಂತೆ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

Related Articles

Back to top button