ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಶಿಕ್ಷಣ ಇಲಾಖೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ.

ಮಾ.9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪ್ರತಿ ವರ್ಷ 5 ಅಥವಾ 6 ಮಾತ್ರ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಈ ಬಾರಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಎಲ್ಲ ವಿಷಯಗಳಲ್ಲೂ 1 ಅಂಕದ 20 ಪ್ರಶ್ನೆಗಳನ್ನು ಕೇಳಿದೆ. ಈ 20 ಪ್ರಶ್ನೆಗಳಲ್ಲಿ 12 ಬಹುಆಯ್ಕೆ ಪ್ರಶ್ನೆಗಳು, ಕೆಲವು ಬಿಟ್ಟಸ್ಥಳ ತುಂಬಿರಿ ಮತ್ತು ಹೊಂದಿಸಿ ಬರೆಯಿರಿ ಇತ್ಯಾದಿ ಪ್ರಶ್ನೆಗಳನ್ನು ಕೇಳಿದೆ. ಈ ಬದಲಾವಣೆ ಹೊರತಾಗಿಯೂ ಪ್ರಶ್ನೆಪತ್ರಿಕೆ ಮಾದರಿ ಮೊದಲಿನಂತೆಯೇ ಉಳಿಯುತ್ತದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

ಈ ಪದ್ಧತಿ ಈಗಾಗಲೇ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿದ್ದು ಇದೀಗ ಇವುಗಳ ಸಾಲಿಗೆ ಕರ್ನಾಟಕವೂ ಸೇರ್ಪಡೆಯಾದಂತಾಗಿದೆ.

https://pragati.taskdun.com/a-student-who-drank-alcohol-and-urinated-on-a-co-passenger/
https://pragati.taskdun.com/praveen-nettaru-murder-case-another-accused-was-arrested-in-a-cinematic-fashion/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button