ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ವಿಶೇಷ ಭೋಜನ ಹಾಗೂ ಶಾಲೆಗಾಗಿ ನಾವು-ನೀವು ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಹಬ್ಬ ಹರಿದಿನಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಶಾಲೆಗಳಲ್ಲಿ ವಿಶೇಷ ಭೋಜನ ವ್ಯವಸ್ಥೆ ಮಾಡಬೇಕು. ಈ ಕಾರ್ಯಕ್ರಮದಡಿ ಟ್ರಸ್ಟ್, ಸಂಘ-ಸಂಸ್ಥೆಗಳು, ಎಸ್ ಡಿಎಂಸಿಗಳು ಸಾರ್ವಜನಿಕರು ಸೇರಿದಂತೆ ಸಮುದಾಯದವರು ಆರ್ಥಿಕ ನೆರವು, ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು.
ಈ ರೀತಿ ನೀಡುವ ಆಹಾರಗಳು ಸಂಪೂರ್ಣ ಸಸ್ಯಹಾರಿಯಾಗಿರಬೇಕು. ಇಲಾಖೆ ಗುರುತಿಸಿರುವ ಆಹಾರ ಪದಾರ್ಥಗಳ ಪಟ್ಟಿಯಲ್ಲಿರಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಯಾವುದೇ ಧರ್ಮ, ಜಾತಿ, ವರ್ಗ, ಲಿಂಗ ಬೇಧವಿಲ್ಲದೇ ನಾವೆಲ್ಲರೂ ಒಂದು ಎಂಬ ಏಕತಾ ಭಾವನೆ ಬೆಳೆಸುವುದೇ ಈ ಕಾರ್ಯಕ್ರಮದ ಉದ್ದೇಶ ಎಂದು ತಿಳಿಸಿದೆ.
*ನಮ್ಮ ಕ್ಲಿನಿಕ್ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ*
https://pragati.taskdun.com/namma-cliniccm-basavaraj-bommaihubli/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ