Latest

ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ರೂಪಾಂತರಿ ಕೊರೊನಾ ಭೀತಿ ಹಾಗೂ ಹೆಚ್ಚುತ್ತಿರುವ ಕೋವಿಡ್ ಕೇಸ್ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಪ್ರಮುಖವಾಗಿ ಮೂರು ಭಾಗಗಳ ಶಿಕ್ಷಣ ಸಂಸ್ಥೆಗಳಿಗೆ ಧಾರವಾಡ, ಬೆಂಗಳೂರು, ಮೈಸೂರು ಭಾಗದ ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

ಗೈಡ್ ಲೈನ್:
* ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಬೇಕು

* ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

* ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್

* ಕೇರಳ ಗಡಿ ಭಾಗದವರಿಗೆ ಸ್ಕ್ರೀನಿಂಗ್ ಕಡ್ಡಾಯ

* ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ತಿಂಗಳು ಬ್ರೇಕ್.

* ಕಾರ್ಯಾಗಾರ, ಸೆಮಿನಾರ್ ಮುಂದೂಡಲು ಸೂಚನೆ
* ಅಗತ್ಯವಿದ್ದರೆ ಕಡಿಮೆ ಸಂಖ್ಯೆ ವಿದ್ಯಾರ್ಥಿಗಳಿಗೆ ಸೆಮಿನಾರ್ ಉಳಿದವರಿಗೆ ವರ್ಚುವಲ್ ನಲ್ಲಿ ಅವಕಾಶ

* ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button