EducationKannada NewsKarnataka News

*ಶಾಲಾ ಶಿಕ್ಷಕರಿಗೆ ವಾರ್ನಿಂಗ್ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಕೆಲವು ಶಿಕ್ಷಕರು ರಾಜಕೀಯ, ಲೇವಾದೇವಿ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿಕ್ಷಕರು ತಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಬೇಕು ಇಲ್ಲದಿದ್ದರೆ ಕಠಿಣ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮಧು, ಶಿಕ್ಷಕರು ಶಾಲೆಗಳಲ್ಲಿ ಹಾಜರಿರಬೇಕು ಮತ್ತು ಪ್ರಾಕ್ಸಿ ಶಿಕ್ಷಕರನ್ನು ಬಳಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದರು.

10,000 ಶಿಕ್ಷಕರ ನೇಮಕಕ್ಕೆ ರಾಜ್ಯ ಬಜೆಟ್‌ ನಲ್ಲಿ ಅನುಮೋದನೆ ನೀಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಶೇ.80ರಷ್ಟು ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button