Belagavi NewsBelgaum NewsEducationKannada NewsKarnataka NewsPolitics

*ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವÀ  ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ 5000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

Home add -Advt

Related Articles

Back to top button